
ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಕೆ.ಎಲ್. ರಾಹುಲ್ ಈ ಬಾರಿಯ ಐಪಿಎಲ್ ನಲ್ಲಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಎಲ್. ರಾಹುಲ್ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಸಾಮಾಜಿಕ ಜಾಲತಾಣವಾದ ಟ್ವಿಟರ್ ನಲ್ಲಿ ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು ಎಂದು ಕೆ.ಎಲ್. ರಾಹುಲ್ ಬರೆದುಕೊಂಡಿದ್ದಾರೆ.