ಶಾರ್ಜಾದಲ್ಲಿ ಭಾನುವಾರ ನಡೆದ ಐಪಿಎಲ್ ನ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಂಭದಲ್ಲಿ ಕೆ.ಎಲ್. ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಜೊತೆಯಾಟವಾಡಿದರು ಮಯಾಂಕ್ ಅಗರ್ವಾಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದರು. ಕೇವಲ 45 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತಿ ವೇಗದಲ್ಲಿ ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದರು.
ಇವರ ಈ ಸ್ಫೋಟಕ ಇನ್ನಿಂಗ್ಸ್ ನಲ್ಲಿ 7 ಸಿಕ್ಸರ್ 10 ಬೌಂಡರಿಗಳಿದ್ದವು. 50 ಎಸೆತಗಳಲ್ಲಿ 106 ರನ್ ಗಳಿಸುವ ಮೂಲಕ ಸ್ಯಾಮ್ ಕರನ್ ಬೌಲಿಂಗ್ನಲ್ಲಿ ಔಟಾದರು ನಂತರ ಕೆಎಲ್ ರಾಹುಲ್ ಕೂಡ 69 ರನ್ ಸಿಡಿಸಿ ಔಟಾದರು. ಕೊನೆಯ ಹಂತದಲ್ಲಿ ನಿಕೊಲಸ್ ಪೂರನ್ ಅಬ್ಬರಿಸಿದ್ದು, 8 ಎಸೆತಗಳಲ್ಲಿ 25 ರನ್ ಗಳಿಸಿದರು. ಒಟ್ಟಾರೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 2 ವಿಕೆಟ್ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೇವಲ 4ರನ್ ಗಳಿಸಿ ಕೋಟ್ ರೇಲ್ ಬೌಲಿಂಗ್‌ನಲ್ಲಿ ಔಟಾದರು. ನಂತರ ನಾಯಕ ಸ್ಟೀವ್ ಸ್ಮಿತ್ ಹಾಗೂ ಸಂಜು ಸಾಮ್ಸನ್ ಅವರ ಅವರ ಜೊತೆಯಾಟದಿಂದ ರಾಜಸ್ಥಾನ್ ರಾಯಲ್ಸ್ ತಂಡ ಚೇತರಿಕೆ ಕಂಡಿತು. ಸ್ಟೀವ್ ಸ್ಮಿತ್ 27 ಎಸೆತಗಳಲ್ಲಿ 50ರನ್ ಗಳಿಸಿ ಔಟಾದರು. ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು, 42 ಎಸೆತಗಳಲ್ಲಿ 85 ರನ್ ಬಾರಿಸಿದ್ದು, ಇದರಲ್ಲಿ 7 ಸಿಕ್ಸರ್ ಹಾಗೂ 4 ಬೌಂಡರಿ ಇದ್ದವು. ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದ ರಾಹುಲ್ ಕೊನೆ ಹಂತದಲ್ಲಿ ಅಬ್ಬರದ ಬ್ಯಾಟಿಂಗ್ ತೋರಿದ್ದು, ಒಂದೇ ಓವರ್ ನಲ್ಲಿ 5 ಸಿಕ್ಸರ್ ಗಳಿಸಿ ಪಂದ್ಯದ ದಿಕ್ಕನ್ನೇ ಬದಲಿಸಿದರು. ಕೊನೆಯ ಓವರ್ನಲ್ಲಿ ಟಾಮ್ ಕರನ್ ಬೌಂಡರಿ ಬಾರಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಜಯಭೇರಿ ಬಾರಿಸಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ ಗಳ ರೋಚಕ ಜಯ ಸಾಧಿಸಿತು.