ಭಾನುವಾರ ದುಬೈನಲ್ಲಿ ನಡೆದ ಐಪಿಎಲ್ ನ 18 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಂಭದಲ್ಲಿ ಮಾಯಂಕ್ ಅಗರ್ವಾಲ್ 26 ರನ್ ಗಳಿಸಿ ಪಿಯೂಶ್ ಚಾವ್ಲಾ ಬೌಲಿಂಗ್ ನಲ್ಲಿ ಔಟಾದರು. ನಂತರ ಬಂದ ಮಂದೀಪ್ ಸಿಂಗ್ 27 ರನ್ ಗಳಿಸಿ ರವೀಂದ್ರ ಜಡೇಜಾ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಕಣಕ್ಕಿಳಿದ ನಿಕೋಲಸ್ ಪೂರನ್ 17 ಎಸೆತಗಳಲ್ಲಿ (33) ರನ್ ಗಳಿಸಿ ಔಟಾದರು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದ ಆರಂಭಿಕ ಆಟಗಾರ ನಾಯಕ ಕೆ.ಎಲ್. ರಾಹುಲ್ 63 ರನ್ ಗಳಿಸಿದ್ದು ಶಾರ್ದುಲ್ ಠಾಕುರ್ ಬೌಲಿಂಗ್‌ನಲ್ಲಿ ಔಟಾದರು. ಕೊನೆ ಹಂತದಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಹಾಗೂ ಸರ್ಫಾರಾಜ್ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 4 ವಿಕೆಟ್ ನಷ್ಟಕ್ಕೆ 178ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡದಲ್ಲಿ ಆರಂಭಿಕ ಆಟಗಾರರಾದ ಶೇನ್ ವಾಟ್ಸನ್ ಹಾಗೂ ಪಾಫ್ ಡುಪ್ಲೆಸಿಸ್ ಭರ್ಜರಿ ಜೊತೆಯಾಟವಾಡಿದರು. ಶೇನ್ ವಾಟ್ಸನ್ 53 ಎಸೆತಗಳಲ್ಲಿ (83)ರನ್ 11 ಬೌಂಡರಿ ಹಾಗೂ 3 ಸಿಕ್ಸರ್, ಪಾಫ್ ಡು ಪ್ಲೆಸಿಸ್ 53 ಎಸೆತಗಳಲ್ಲಿ (87) ರನ್ 11 ಸಿಕ್ಸರ್ ಹಾಗೂ 1 ಬೌಂಡರಿ ಸಿಡಿಸಿದ್ದು ಇವರಿಬ್ಬರ ಜೊತೆಯಾಟದಿಂದ ಚೆನ್ನೈ ಸೂಪರ್‌ಕಿಂಗ್ಸ್ ತಂಡ ವಿಕೆಟ್ ನಷ್ಟವಿಲ್ಲದೆ 17.4 ಓವರ್ ನಲ್ಲಿ 181 ರನ್ ಗಳಿಸಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತು.