alex Certify ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್ ಗೆ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್ ಗೆ ಭರ್ಜರಿ ಜಯ

ಇಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಂಭದಲ್ಲಿ ಮಯಾಂಕ್ ಅಗರ್ವಾಲ್ 26ರನ್ ಗಳಿಸಿ ಲುಂಗಿ ನಿಗಿಡಿ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ನಂತರ ಆರಂಭಿಕ ಆಟಗಾರರಾದ ನಾಯಕ ಕೆಎಲ್ ರಾಹುಲ್ 29ರನ್ ಗಳಿಸಿದ್ದು ಔಟಾದರು. ಬಳಿಕ ಬಂದ ನಿಕೋಲಸ್ ಪೂರನ್ ಕೇವಲ 2ರನ್ ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್ ನಲ್ಲಿ ಔಟಾದರು.

ಕ್ರಿಸ್ ಗೇಲ್ 12ರನ್ ಗಳಿಸಿದ್ದು ಇಮ್ರಾನ್ ತಾಹೀರ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ದೀಪಕ್ ಹೂಡಾ ಹೊರತುಪಡಿಸಿ ಯಾವ ಬ್ಯಾಟ್ಸ್ ಮನ್ ಉತ್ತಮ ಪ್ರದರ್ಶನ ತೋರಲಿಲ್ಲ. ದೀಪಕ್ ಕೂಡ 30 ಎಸೆತಗಳಲ್ಲಿ (62) ರನ್ ಗಳಿಸುವ ಮೂಲಕ ಮೂಲಕ ಅಜೇಯರಾಗಿ ಉಳಿದರು. ಒಟ್ಟಾರೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ವಿಕೆಟ್ ನಷ್ಟಕ್ಕೆ 153 ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಆರಂಭದಲ್ಲಿ ಫಾಫ್ ಡು ಪ್ಲೆಸಿಸ್ 34 ಎಸೆತಗಳಲ್ಲಿ (48) ರನ್ ಗಳಿಸಿ ಕ್ರಿಸ್ ಜೋರ್ದನ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 62 ರನ್ ಗಳಿಸಿದ್ದು ಅಜೇಯರಾಗಿ ಉಳಿದರು. ಅಂಬಟಿ ರಾಯ್ಡು 30 ರನ್ ಗಳಿಸುವ ಮೂಲಕ ಉತ್ತಮ ಜೊತೆಯಾಟ ನೀಡಿದರು. ಈ ಮೂಲಕ ಚೆನ್ನೈ ಸೂಪರ್‌ಕಿಂಗ್ಸ್ ತಂಡ 9 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...