ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ತಮ್ಮ ಪತ್ನಿ ಹಾಗೂ ಮಕ್ಕಳ ಜೊತೆ ಇರುವ ಪೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಕುಟುಂಬದ ಜೊತೆ ಕೆಲವು ಚಿತ್ರಗಳು. ನಾನು ಈ ವರ್ಷದಲ್ಲಿ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಂಡಿದ್ದೇನೆ ಎಂದು ಡೇವಿಡ್ ವಾರ್ನರ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ.
ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕ್ವಾಲಿಫೈಯರ್ 2 ರಲ್ಲಿ ಸೋಲುವ ಮೂಲಕ ಫೈನಲ್ ಪ್ರವೇಶಿಸಲಿಲ್ಲ. ಆದರೂ ಎಲ್ಲಾ ತಂಡಗಳ ಮೇಲೆ ಪೈಪೋಟಿಯನ್ನು ನೀಡಿತು.