alex Certify ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿರಲು ಕಾರಣವೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಗೂಲಿ ಹೋಮ್ ಕ್ವಾರಂಟೈನ್ ನಲ್ಲಿರಲು ಕಾರಣವೇನು ಗೊತ್ತಾ…?

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಬುಧವಾರ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಗಂಗೂಲಿ ಹಿರಿಯ ಸಹೋದರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದಾದ ನಂತ್ರ ಗಂಗೂಲಿ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಕೊರೊನಾ ವೈರಸ್ ಖಚಿತವಾದ ನಂತರ ಸ್ನೇಹಶಿಶ್ ಗಂಗೂಲಿಯವರನ್ನು ಕೋಲ್ಕತ್ತಾದ ಬೆಲ್ಲೆ ವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾಳದ ಕ್ರಿಕೆಟ್ ಅಸೋಸಿಯೇಷನ್‌ನ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸ್ನೇಹಶಿಶ್ ಗಂಗೂಲಿ ಅವರಿಗೆ ಕಳೆದ ಹಲವು ದಿನಗಳಿಂದ ಜ್ವರ ಬರುತ್ತಿತ್ತು. ಬುಧವಾರ ಅವರ ಕೋವಿಡ್ 19 ಪರೀಕ್ಷಾ ವರದಿ ಸಕಾರಾತ್ಮಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌರವ್ ಗಂಗೂಲಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಆದ್ರೆ ಈ ಬಗ್ಗೆ ಸೌರವ್ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...