
ಐಪಿಎಲ್ 2021 ರಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತಾರೆ ಹಾಗೂ ಯಾವ ಆಟಗಾರರನ್ನು ಕೈ ಬಿಡಲಿದ್ದಾರೆ ಎಂಬುದು ಕ್ರಿಕೆಟ್ ಪ್ರೇಮಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿತ್ತು.
ಫೆಬ್ರವರಿಯಂದು ಐಪಿಎಲ್ ಹರಾಜು ನಡೆಯುತ್ತಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿ ಸಾಕಷ್ಟು ಆಟಗಾರರನ್ನು ಬಿಡುಗಡೆಗೊಳಿಸಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ಕೈಬಿಟ್ಟಿದ್ದಾರೆ. ಕಳೆದ ಐಪಿಎಲ್ ಸೀಸನ್ ನಲ್ಲಿ ಮ್ಯಾಕ್ಸ್ ವೆಲ್ ತುಂಬಾ ಕಳಪೆ ಪ್ರದರ್ಶನ ತೋರಿ ಸಾಕಷ್ಟು ಟೀಕೆಗೂ ಒಳಗಾಗಿದ್ದರು. ಇದೀಗ ಮ್ಯಾಕ್ಸ್ ವೆಲ್ ಅವರನ್ನು ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಕೈಬಿಟ್ಟಿದೆ.