ಇಂದು ಐಪಿಎಲ್ ನ 10ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ. ಆರ್ ಸಿ ಬಿ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಂಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎರಡು ತಂಡಗಳು ಇದುವರೆಗೂ 26ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ 14 ಬಾರಿ ಜಯ ಕಂಡರೆ ಆರ್ ಸಿ ಬಿ ತಂಡ 12 ಬಾರಿ ಜಯ ಗಳಿಸಿದೆ. ಈ ಬಾರಿಯ ಐಪಿಎಲ್ ನಲ್ಲಿ ಆರ್ ಸಿ ಬಿ ತಂಡ ಆಡಿರುವ 2ಪಂದ್ಯಗಳಲ್ಲಿ ಜಯಭೇರಿ ಸಾಧಿಸಿದ್ದು, +0.175 ನೆಟ್ ರನ್ ರೇಟ್ ನಿಂದ ಪಾಯಿಂಟ್ ಟೇಬಲ್ ನಲ್ಲಿ 2 ನೇ ಸ್ಥಾನದಲ್ಲಿದೆ.
ಇನ್ನು ಇಯಾನ್ ಮೊರ್ಗನ್ ನಾಯಕತ್ವದ ಕೆಕೆಆರ್ ತಂಡ 2 ಪಂದ್ಯಗಳನ್ನಾಡಿದ್ದು 1 ರಲ್ಲಿ ಗೆದ್ದು ಇನ್ನೊಂದು ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ 6 ನೇ ಸ್ಥಾನ ಕಾಯ್ದುಕೊಂಡಿದೆ.