ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ನ 21 ನೇ ಪಂದ್ಯ ನಡೆಯುತ್ತಿದ್ದು ಇಯಾನ್ ಮೊರ್ಗನ್ ನಾಯಕತ್ವದ ಕೆಕೆಆರ್ ತಂಡ ಹಾಗೂ ಕೆ ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ ಕೆಕೆಆರ್ ತಂಡದ ನಾಯಕ ಇಯಾನ್ ಮೊರ್ಗನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕೆ ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಇದುವರೆಗೂ 5 ಪಂದ್ಯಗಳನ್ನಾಡಿದ್ದು 2 ರಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡಿದೆ.ಇನ್ನು ಕೆಕೆಆರ್ ತಂಡ 5 ಪಂದ್ಯಗಳನ್ನು ಆಡಿದ್ದು ಕೇವಲ 1 ಪಂದ್ಯದಲ್ಲಿ ಗೆದ್ದು ಐಪಿಎಲ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ ಇಂದು ಕೆಕೆಆರ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.