
ಇಂದು ಐಪಿಎಲ್ ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಂಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಎರಡು ತಂಡಗಳಿಂದ ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಗೆದ್ದು 1ಪಂದ್ಯದಲ್ಲಿ ಸೋತಿದೆ. ಇನ್ನು ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಎರಡು ಪಂದ್ಯಗಳನ್ನಾಡಿದ್ದು ಎರಡು ಪಂದ್ಯಗಳಲ್ಲೂ ಸೋಲು ಕಂಡಿದೆ.
ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸೋಲನ್ನು ಸನ್ ರೈಸರ್ಸ್ ತಪ್ಪಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ. ಉಭಯ ತಂಡಗಳು ಇದುವರೆಗೂ 16 ಬಾರಿ ಮುಖಾಮುಖಿಯಾಗಿದ್ದು 8 ಬಾರಿ ಜಯಿಸುವ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿವೆ.