
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ನ 28ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಸೆಣಸಾಟ
ರಾಜಸ್ಥಾನ್ ರಾಯಲ್ಸ್ ತಂಡ ಇದುವರೆಗೂ 6 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 4 ಪಂದ್ಯದಲ್ಲಿ ಸೋಲುಕಂಡಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ 6 ಪಂದ್ಯಗಳಲ್ಲಿ 5ರಲ್ಲಿ ಸೋತು ಕೇವಲ 1 ಪಂದ್ಯದಲ್ಲಿ ಜಯಗಳಿಸಿದೆ. ಈ ಎರಡೂ ತಂಡಗಳು ಗೆಲುವಿನ ಹುಡುಕಾಟದಲ್ಲಿವೆ.