
ನಿನ್ನೆ ಪಾಕಿಸ್ತಾನ ಹಾಗೂ ಜಿಂಬಾಬ್ವೆ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಪಾಕಿಸ್ತಾನ ತಂಡ 24ರನ್ ಗಳ ಭರ್ಜರಿ ಜಯ ಸಾಧಿಸಿತು.
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. 2000 ರನ್ ಗಳನ್ನು ಅಂತರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತಿವೇಗವಾಗಿ ತಲುಪಿದ್ದಾರೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 56 ಪಂದ್ಯಗಳಲ್ಲಿ 2000 ರನ್ ಗಳಿಸಿದ್ದರು. ಬಾಬರ್ ಅಜಂ ಕೇವಲ 52 ಪಂದ್ಯಗಳಲ್ಲೇ 2000 ರನ್ ಗಳಿಸಿದ್ದು ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.