ಆಕ್ಲಂಡ್ ನ ಈಡನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲ್ಯಾಂಡ್ ಹಾಗೂ ಪಾಕಿಸ್ತಾನ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಶಾದಾಬ್ ಖಾನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಆರಂಭದಲ್ಲಿ ಶಫೀಕ್ ಶೂನ್ಯಕ್ಕೆ ಜಾಕೋಬ್ ಡುಫಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಮೊಹಮ್ಮದ್ ರಿಜ್ವಾನ್ 17ರನ್ ಗಳಿಸಿದ್ದು, ಔಟಾದರು. ಸತತ ವಿಕೆಟ್ ಗಳನ್ನು ಕಳೆದುಕೊಂಡ ಪಾಕಿಸ್ತಾನ ತಂಡಕ್ಕೆ ನಾಯಕ ಶಾದಾಬ್ ಖಾನ್ 42 ರನ್ ಗಳಿಸುವ ಮೂಲಕ ಆಸರೆಯಾದರು. ಒಟ್ಟಾರೆ ಪಾಕಿಸ್ತಾನ ತಂಡ 9 ವಿಕೆಟ್ ನಷ್ಟಕ್ಕೆ 153ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ಆರಂಭದಲ್ಲಿ ಮಾರ್ಟಿನ್ ಗಪ್ಟಿಲ್ ಕೇವಲ 6ರನ್ ಗಳಿಸಿ ಶಹೀನ್ ಅಫ್ರಿದಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಕೋನ್ವೆ 5ರನ್ ಗಳಿಸಿ ಔಟಾದರೆ ನಂತರ ಗ್ಲೇನ್ ಪಿಲಿಪ್ಸ್ 23ರನ್ ಗಳಿಸಿ ಔಟಾದರು.
ನ್ಯೂಜಿಲೆಂಡ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದ ಟಿಮ್ ಸೆಯ್ 57ರನ್ ಗಳಿಸಿದ್ದು, ಶಹೀನ್ ಅಫ್ರಿದಿ ಬೌಲಿಂಗ್‌ನಲ್ಲಿ ಔಟಾದರು. ಕೊನೆ ಹಂತದಲ್ಲಿ ಜೇಮ್ಸ್ ನೀಶಮ್ ಹಾಗೂ ಮಿಚೆಲ್ ಸ್ಯಾಂಟ್ನರ್ ಅವರ ಭರ್ಜರಿ ಬ್ಯಾಟಿಂಗ್ ನಿಂದ ನ್ಯೂಜಿಲ್ಯಾಂಡ್ ತಂಡ 5 ವಿಕೆಟ್ ನಷ್ಟಕ್ಕೆ 156ರನ್ ಗಳಿಸಿತು. ಈ ಮೂಲಕ ನ್ಯೂಜಿಲ್ಯಾಂಡ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು ಮೂರು ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲ್ಯಾಂಡ್ ತಂಡ 1-0 ಮುನ್ನಡೆ ಗಳಿಸಿದೆ.