
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕ್ರಿಕೆಟಿಗ ಸುರೇಶ್ ರೈನಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವರ್ಕೌಟ್ ವಿಡಿಯೋಗಳು ಹಾಗೂ ತಮ್ಮ ಕುಟುಂಬದ ಜೊತೆ ಇರುವ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ವೈಯಕ್ತಿಕ ಕಾರಣದಿಂದ ಸುರೇಶ್ ರೈನಾ ಈ ಬಾರಿಯ ಐಪಿಎಲ್ ನಿಂದ ದೂರ ಉಳಿದರು. ಇದೀಗ ಸುರೇಶ್ ರೈನಾ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.