alex Certify ನಾಳೆ ಐಪಿಎಲ್ ನ ಮೊದಲನೇ ಪಂದ್ಯ: ಆರ್.ಸಿ.ಬಿ. ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಐಪಿಎಲ್ ನ ಮೊದಲನೇ ಪಂದ್ಯ: ಆರ್.ಸಿ.ಬಿ. ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ

ನಾಳೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ ನ ಮೊದಲನೇ ಪಂದ್ಯ ನಡೆಯುತ್ತಿದ್ದು‌, ಐಪಿಎಲ್ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲನೇ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.

ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ 5 ಬಾರಿ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಬಲಿಷ್ಠ ತಂಡವೆನಿಸಿಕೊಂಡಿದೆ. ಐಪಿಎಲ್ ನಲ್ಲಿ ಅತಿ ಹೆಚ್ಚು ಬಾರಿ ಕಪ್ ಗೆದ್ದಿರುವ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಹಿಟ್ ಮ್ಯಾನ್ ರೋಹಿತ್ ಶರ್ಮ ಮುಂಬೈ ಇಂಡಿಯನ್ಸ್ ತಂಡದ ಅತ್ಯುತ್ತಮ ನಾಯಕರಾಗಿ ಮುನ್ನಡೆಸುತ್ತಿದ್ದಾರೆ.

IPL 2021: ಚೆನ್ನೈ ತಂಡದ ಈ ಆಟಗಾರರಿಗೆ ಇದು ಕೊನೆ ಪಂದ್ಯ….?

ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಇದುವರೆಗೂ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸುತ್ತಲೇ ಇದೆ. ಗ್ಲೆನ್ ಮ್ಯಾಕ್ಸ್ ವೆಲ್ ಆರ್.ಸಿ.ಬಿ. ತಂಡಕ್ಕೆ ಸೇರ್ಪಡೆಯಾಗಿರುವುದರಿಂದ ಬ್ಯಾಟಿಂಗ್ ನಲ್ಲಿ ಬಲಿಷ್ಠವಾಗಿದೆ. ಈ ಬಾರಿಯಾದರೂ ಐಪಿಎಲ್ ಕಪ್ ಗೆಲ್ಲುತ್ತಾ ಕಾದು ನೋಡಬೇಕಾಗಿದೆ. ನಾಳೆ ನಡೆಯಲಿರುವ ಪಂದ್ಯದಲ್ಲಿ ರನ್ ಗಳ ಹೊಳೆ ಹರಿಯುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...