alex Certify ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್‌ ಗೆ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್‌ ಗೆ ಭರ್ಜರಿ ಜಯ

 

ಇಂದು ಚೆನ್ನೈನ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಆರಂಭದಲ್ಲಿ ಕೆ.ಎಲ್. ರಾಹುಲ್ 4ರನ್ ಗಳಿಸಿ ಔಟಾದರೇ ಮಯಾಂಕ್ ಅಗರ್ವಾಲ್ 22ರನ್ ಗಳಿಸಿದ್ದು, ಖಲೀಲ್ ಅಹ್ಮದ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಕ್ರಿಸ್ ಗೇಲ್ ಕೂಡ 15ರನ್ ಗಳಿಸಿ ರಶೀದ್ ಖಾನ್ ಬೌಲಿಂಗ್‌ನಲ್ಲಿ ಔಟಾದರು. ಒಟ್ಟಾರೆ ಪಂಜಾಬ್ ಕಿಂಗ್ಸ್ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 120 ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಆರಂಭಿಕ ಆಟಗಾರ ನಾಯಕ ಡೇವಿಡ್ ವಾರ್ನರ್‌ 37ರನ್ ಗಳಿಸಿದ್ದು, ಫ್ಯಾಬಿಯನ್ ಅಲೆನ್ ಗೆ ತಮ್ಮ ವಿಕೆಟ್ ಒಪ್ಪಿಸಿದರು.

ನಂತರ ಜಾನಿ ಬೈರ್ಸ್ಟೋವ್ 56(63) ಹಾಗೂ ಕೇನ್ ವಿಲಿಯಮ್ಸನ್ 16ರನ್ ಇವರ ಜೊತೆಯಾಟದಿಂದ ಸನ್ ರೈಸರ್ಸ್ ಹೈದರಾಬಾದ್‌ ತಂಡ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಸನ್ ರೈಸರ್ಸ್ ಹೈದರಾಬಾದ್ ಈ ಬಾರಿಯ ಐಪಿಎಲ್ ನಲ್ಲಿ ತನ್ನ ಮೊದಲನೇ ಜಯ ಕಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...