ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಮ್ಮ ಪತ್ನಿ ರಿತಿಕಾ ಜೊತೆಗಿರುವ ಹೊಸ ಫೋಟೊವೊಂದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ರೋಹಿತ್ ಶರ್ಮಾ ಅವರು ನೀವು ಇಷ್ಟಪಡುವುದನ್ನು ಯಾವಾಗಲೂ ಜೊತೆಯಲ್ಲಿಯೇ ಹಿಡಿದುಕೊಳ್ಳಿ ಎಂದು ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಕಮೆಂಟ್ ಗಳು ಬಂದಿವೆ. ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್, ನಾನು ನಿಮ್ಮ ಕೆನ್ನೆಗಳನ್ನು ಇಷ್ಟಪಡುತ್ತೇನೆ ಅವುಗಳನ್ನು ಹಿಡಿದಿಟ್ಟುಕೊಳ್ಳಬಹುದೇ ಎಂದು ಕೇಳಿದ್ದಾರೆ.
https://www.instagram.com/p/CCOGD7ABi2S/?igshid=1ng5wt5wxwmke