alex Certify ಫೈನಲ್ ನಲ್ಲಿ ಮುಗ್ಗರಿಸಿದ ಕೊಹ್ಲಿ ಪಡೆ: ಭಾರತಕ್ಕೆ ಭಾರೀ ನಿರಾಸೆ, ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೈನಲ್ ನಲ್ಲಿ ಮುಗ್ಗರಿಸಿದ ಕೊಹ್ಲಿ ಪಡೆ: ಭಾರತಕ್ಕೆ ಭಾರೀ ನಿರಾಸೆ, ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್

ಸೌತಾಂಪ್ಟನ್ ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಗಳಿಸಿದೆ. ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ಪಡೆ ನಿರಾಸೆ ಅನುಭವಿಸಿದೆ. ನ್ಯೂಜಿಲೆಂಡ್ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದೆ.

ಮಳೆ ಕಾಟದ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 8 ವಿಕೆಟ್ ಗಳ ಜಯ ಗಳಿಸಿದೆ. ಎರಡೂ ಇನಿಂಗ್ಸ್ ಗಳಲ್ಲಿ ದಿಢೀರ್ ಕುಸಿತ ಕಂಡ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಸೋಲಿಗೆ ಕಾರಣ ಕಾರಣವಾಗಿದ್ದು, ಚಾಂಪಿಯನ್ ಆದ ನ್ಯೂಜಿಲೆಂಡ್ ತಂಡ 11.73 ಕೋಟಿ ರೂಪಾಯಿ ಬಹುಮಾನ ಪಡೆದಿದೆ. ರನ್ನರ್ ಅಪ್ ಭಾರತಕ್ಕೆ 5.86 ಕೋಟಿ ರೂಪಾಯಿ ಬಹುಮಾನ ಗಳಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗಳಿಸಿದ್ದು, ನ್ಯೂಜಿಲೆಂಡ್ 249 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 170 ರನ್ ಗಳಿಸಿದ್ದು, ನ್ಯೂಜಿಲೆಂಡ್ ಗೆಲುವಿಗೆ 139 ರನ್ ಗುರಿ ನೀಡಿತ್ತು. 45.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿದ ನ್ಯೂಜಿಲೆಂಡ್ ಭರ್ಜರಿ ಜಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...