ಅಬುಧಾಬಿಯಲ್ಲಿ ಭಾನುವಾರದಂದು ನಡೆದ ಐಪಿಎಲ್ ನ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಕ್ವಿಂಟನ್ ಡಿ ಕಾಕ್ ಕೇವಲ 6 ರನ್ ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್‌ನಲ್ಲಿ ಔಟಾದರು. ನಂತರ ಆರಂಭಿಕ ಆಟಗಾರ ಈಶನ್ ಕಿಶನ್ 37ರನ್ ಗಳಿಸಿದ್ದು, ಕಾರ್ತಿಕ್ ತ್ಯಾಗಿ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು.
ಸೂರ್ಯ ಕುಮಾರ್ ಯಾದವ್ 40ರನ್ ಗಳಿಸಿ ಔಟಾಗಿದ್ದು, ಬಳಿಕ ಬಂದ ನಾಯಕ ಕೈರನ್ ಪೊಲಾರ್ಡ್ 6 ರನ್ ಗಳಿಸಿ ಶ್ರೇಯಸ್ ಗೋಪಾಲ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಸೂರ್ಯ ಕುಮಾರ್ ಯಾದವ್ 40 ರನ್ ಗಳಿಸಿ ಔಟಾಗಿದ್ದು, ನಂತರ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿ 21 ಎಸೆತಗಳಲ್ಲಿ 60 ರನ್ ಗಳಿಸಿದರು. ಇವರ ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್ ಹಾಗೂ 2 ಬೌಂಡರಿಗಳಿದ್ದವು. ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ನಷ್ಟಕ್ಕೆ 195 ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ 13ರನ್ ಗಳಿಸಿ ಜೇಮ್ಸ್ ಪ್ಯಾಟಿನ್ಸನ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ನಾಯಕ ಸ್ಟಿವನ್ ಸ್ಮಿತ್ 11ರನ್ ಗಳಿಸಿ ಔಟಾದರು. ನಂತರ ಬೆನ್ ಸ್ಟೋಕ್ಸ್ 60 ಎಸೆತಗಳಲ್ಲಿ (107) ಹಾಗೂ ಸಂಜು ಸ್ಯಾಮ್ಸನ್ 31 ಎಸೆತಗಳಲ್ಲಿ (54) ಇವರ ಭರ್ಜರಿ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 8 ವಿಕೆಟ್ ಗಳಿಂದ ಜಯ ಸಾಧಿಸಿತು.