ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ವರ್ಷದ ಐಪಿಎಲ್ ಗೆ ಸಿದ್ಧವಾಗಿದೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡ ಶುಕ್ರವಾರ ಯುಎಇ ಗೆ ಪ್ರಯಾಣ ಬೆಳೆಸಿದೆ.
ರಾಜಸ್ಥಾನ್ ರಾಯಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಗುರುವಾರ ಯುಎಇ ತಲುಪಿದ್ದು, ಆಟಗಾರರು ಆರು ದಿನಗಳ ಕಾಲ ಕ್ವಾರಂಟೈನ್ ನಲ್ಲಿರಲಿದ್ದಾರೆ. ಸಿಎಸ್ಕೆ ಅಧಿಕೃತ ಟ್ವಿಟ್ಟರ್ ನಲ್ಲಿ ತಂಡದ ಫೋಟೋವನ್ನು ಹಂಚಿಕೊಂಡಿದೆ. ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರವೀಂದ್ರ ಜಡೇಜಾ ಮತ್ತು ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.
ರವೀಂದ್ರ ಜಡೇಜಾ ಕೂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ನ 60 ಪಂದ್ಯಗಳು ದುಬೈ, ಅಬುಧಾಬಿ ಮತ್ತು ಶಾರ್ಜಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 19 ರಿಂದ ಪಂದ್ಯಗಳು ನಡೆಯಲಿವೆ.