ಒಂದು ವಾರದ ಹಿಂದಷ್ಟೇ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಗೆ ಸೇರಿದ್ದ ಅಫ್ಘಾನಿಸ್ತಾನದ ಕ್ರಿಕೆಟಿಗ ನಜೀಬ್ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಈ ಕುರಿತು ಮಂಗಳವಾರ ಅಫ್ಘಾನಿಸ್ತಾನದ ಕ್ರಿಕೆಟ್ ಮಂಡಳಿ ತಿಳಿಸಿದ್ದು, ತಮ್ಮ 29 ನೇ ವಯಸ್ಸಿನಲ್ಲಿ ನಜೀಬ್ ನಿಧನರಾಗಿರುವ ಸುದ್ದಿ ಕೇಳಿ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.
ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಟ್ವೀಟ್ ಮಾಡಿದ್ದು ಅಫ್ಘಾನಿಸ್ತಾನದ ಆರಂಭಿಕ ಆಕ್ರಮಣಕಾರಿ ಆಟಗಾರ ಹಾಗೂ ಉತ್ತಮ ವ್ಯಕ್ತಿ ಅಪಘಾತದಿಂದ ಪ್ರಾಣ ಕಳೆದುಕೊಂಡಿರುವುದಕ್ಕೆ ಸಂತಾಪ ಸೂಚಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.