alex Certify ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಸೆಣಸಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಸೆಣಸಾಟ

ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ನ 28ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಮುಖಾಮುಖಿಯಾಗಲಿವೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 6 ಪಂದ್ಯಗಳನ್ನಾಡಿದ್ದು, 4ರಲ್ಲಿ ಸೋತು 2 ಪಂದ್ಯಗಳಲ್ಲಿ ಜಯ ಕಂಡಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್‌ ತಂಡ 6 ಪಂದ್ಯಗಳಲ್ಲಿ ಕೇವಲ 1 ಪಂದ್ಯಗಳಲ್ಲಿ ಗೆದ್ದು 5 ಪಂದ್ಯದಲ್ಲಿ ಸೋಲು ಕಂಡಿದೆ. ಸತತ ಸೋಲಿನ ನಂತರ ಸನ್ ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ನಾಯಕನ ಬದಲಾವಣೆ ಮಾಡಿದ್ದಾರೆ. ಡೇವಿಡ್ ವಾರ್ನರ್ ಬದಲು ಕೇನ್ ವಿಲಿಯಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ರೋಚಕ ಜಯ

ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು 13 ಬಾರಿ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್‌ 7ಬಾರಿ ಗೆದ್ದರೇ ರಾಜಸ್ಥಾನ್ ರಾಯಲ್ಸ್ 6ಬಾರಿ ಜಯ ಕಂಡಿದೆ. ಇಂದು ಮದ್ಯಾಹ್ನ 3-30ಕ್ಕೆ ಪಂದ್ಯ ಪ್ರಸಾರವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...