ಸಿಡ್ನಿಯಲ್ಲಿ ಭಾರತ-ಆಸ್ಟ್ರೇಲಿಯಾ ಮಧ್ಯೆ ಮೂರನೇ ಟೆಸ್ಟ್ ಪಂದ್ಯ ಶುರುವಾಗಿದೆ.ಪಂದ್ಯಕ್ಕೂ ಮುನ್ನ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಗೀತೆ ಹಾಡುವ ವೇಳೆ ಸಿರಾಜ್ ಭಾವುಕರಾಗಿದ್ದಾರೆ.
ಮೆಲ್ಬೋರ್ನ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಸಿರಾಜ್ ಎರಡನೇ ಪಂದ್ಯದಲ್ಲೂ ಭರವಸೆ ಮೂಡಿಸಿದ್ದಾರೆ. ಆದ್ರೆ ಆಟಕ್ಕೂ ಮುನ್ನ ಸಿಡ್ನಿ ಮೈದಾನದಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಭಾವುಕರಾಗಿದ್ದಾರೆ. ಕಣ್ಣೀರು ಒರೆಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿರಾಜ್ ಗೆ ಜಸ್ಪ್ರಿತ್ ಬುಮ್ರಾ ಸಾಂತ್ವಾನ ಹೇಳಲು ಪ್ರಯತ್ನಿಸಿದ್ದಾರೆ.
ಹೈದರಾಬಾದ್ ಬೌಲರ್ ಸಿರಾಜ್, ಆಸ್ಟ್ರೇಲಿಯಾ ಸರಣಿ ಆರಂಭದಲ್ಲಿಯೇ ತಂದೆಯನ್ನು ಕಳೆದುಕೊಂಡಿದ್ದರು. ಈ ದುಃಖದಲ್ಲಿಯೂ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ ಸಿರಾಜ್ ಉತ್ತಮ ಪ್ರದರ್ಶನ ನೀಡಿದ್ದರು. ಇಂದಿನ ಪಂದ್ಯದಲ್ಲಿ ಸಿರಾಜ್ ಒಂದು ವಿಕೆಟ್ ಪಡೆದಿದ್ದಾರೆ. ಸಿರಾಜ್ ಭಾವುಕರಾದ ವಿಡಿಯೋವನ್ನು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಅಧಿಕೃತ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.
ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್, ಕಳೆದ ಏಳು ವರ್ಷಗಳಲ್ಲಿ ಭಾರತ ಪರ ಟೆಸ್ಟ್ ಪಂದ್ಯವೊಂದರಲ್ಲಿ ಐದು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ರು.