ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಪ್ಲೇ ಆಫ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ವಿರಾಟ್ ಕೊಹ್ಲಿ ಹುಟ್ಟುಹಬ್ಬಕ್ಕೆ ಸಾಕಷ್ಟು ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ವಿರಾಟ್ ಕೊಹ್ಲಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ 1988 ನವೆಂಬರ್ 5 ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.