ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಜನರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಇದೀಗ ಪ್ರಾಣಿಗಳಿಗೆ ಆಹಾರ ನೀಡುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಪ್ರಾಣಿಗಳಿಗೆ ಆಹಾರ ನೀಡುವುದು ನಮ್ಮ ಇಡೀ ಕುಟುಂಬಕ್ಕೆ ಸಂತೋಷವನ್ನು ನೀಡುತ್ತದೆ. ಜೊರಾವರ್ ಸ್ವಲ್ಪ ಹೆದರುತ್ತಿದ್ದ. ಆದರೆ ಅವನು ಈಗ ಪ್ರತಿ ಸೆಕೆಂಡ್ ಅನ್ನು ಆನಂದಿಸುತ್ತಾನೆ ಎಂದು ಧವನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CC3G52XjCq7/?igshid=1fxesmjy3kgqb