alex Certify ಸಂಜು ಸ್ಯಾಮ್ಸನ್ ಕ್ಯಾಚ್ ಗೆ ಕ್ರಿಕೆಟ್ ಪ್ರೇಮಿಗಳು ಫಿದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜು ಸ್ಯಾಮ್ಸನ್ ಕ್ಯಾಚ್ ಗೆ ಕ್ರಿಕೆಟ್ ಪ್ರೇಮಿಗಳು ಫಿದಾ

ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ನಡೆದ ಐಪಿಎಲ್ ನ 7ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಹಿಂದಕ್ಕೆ ತಳ್ಳಿದ ಬೌಲ್ ಅನ್ನು ರಾಜಸ್ಥಾನ್ ರಾಯಲ್ಸ್ ತಂಡದ ವಿಕೆಟ್ ಕೀಪರ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ತಕ್ಷಣವೇ ಜಿಗಿದು ಕ್ಯಾಚ್ ಹಿಡಿದರು. ಈ ವಿಡಿಯೋ ಇದೀಗ  ವೈರಲ್ ಆಗಿದೆ.

ಆರೆಂಜ್ ಕ್ಯಾಪ್ ಪಡೆದ ಶಿಖರ್ ಧವನ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭರವಸೆಯ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಕ್ಯಾಚ್ ಅನ್ನು ಒಂದೇ ಕೈಯಲ್ಲಿ ಹಿಡಿಯುವ ಮೂಲಕ ಸಂಜು ಸ್ಯಾಮ್ಸನ್ ತಮ್ಮ ತಂಡಕ್ಕೆ ನೆರವಾದರು.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಂಜು ಸ್ಯಾಮ್ಸನ್ ಗೆ ಕ್ರಿಕೆಟ್ ಪ್ರೇಮಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದ ಉತ್ತಮ ನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...