ಮರಗಳೇ ನನ್ನ ಮಕ್ಕಳು ಎಂದು ಪೋಷಣೆ ಮಾಡುವ ಮೂಲಕ ಪದ್ಮಶ್ರೀ ಪ್ರಶಸ್ತಿಗೆ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕನವರಿಗೆ ಮಾಜಿ ಕ್ರಿಕೆಟ್ ಆಟಗಾರ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಅವರು 73000 ಕ್ಕೂ ಹೆಚ್ಚು ಮರಗಳನ್ನು ನೆಟ್ಟರು. ಆದರೆ ಕೆಲವೇ ಜನರಿಗೆ ಅವರ ಬಗ್ಗೆ ತಿಳಿದಿದೆ. ಕನಿಷ್ಟ ಪಕ್ಷ ಒಂದು ಮರವನ್ನು ನಾವೆಲ್ಲರೂ ಬೆಳೆಯಬೇಕಾಗಿದೆ. ಧನ್ಯವಾದಗಳು ನಿಮಗೆ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಹರ್ಭಜನ್ ಸಿಂಗ್ ಬರೆದುಕೊಂಡಿದ್ದಾರೆ.