ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿರುವ ಟೀಂ ಇಂಡಿಯಾಕ್ಕೆ ಐಸಿಸಿ ಖುಷಿ ಸುದ್ದಿ ನೀಡಿದೆ. ಐಸಿಸಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರಿಗೆ ದೊಡ್ಡ ಗೌರವ ನೀಡಿದೆ. ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ 2019 ರ ಅತ್ಯುತ್ತಮ ಏಕದಿನ ಕ್ರಿಕೆಟಿಗ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಕ್ರಿಕೆಟ್ ವಿಶ್ವಕಪ್‌ನಲ್ಲಿ ಕ್ರೀಡಾ ಮನೋಭಾವವನ್ನು ತೋರಿಸಿದ್ದಕ್ಕಾಗಿ ಕೊಹ್ಲಿಗೆ ಸ್ಪಿರಿಟ್ ಕ್ರಿಕೆಟ್ ಪ್ರಶಸ್ತಿ ನೀಡಲಾಗ್ತಿದೆ.
ಒಂದು ವರ್ಷದಲ್ಲಿ 59 ವಿಕೆಟ್ ಪಡೆದ ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಅವರನ್ನು ವರ್ಷದ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗ ಎಂದು ಆಯ್ಕೆ ಮಾಡಲಾಗಿದೆ. ರಿಚರ್ಡ್ ಇಲಿಂಗ್ವರ್ತ್ ಅವರಿಗೆ ವರ್ಷದ ಅಂಪೈರ್ ಪ್ರಶಸ್ತಿ ನೀಡಲಾಯಿತು. 2019 ರ ನವೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 7 ರನ್‌ಗಳಿಗೆ 6 ವಿಕೆಟ್ ಪಡೆದ ದೀಪಕ್ ಚಹರ್ ಅವರನ್ನು ಗೌರವಿಸಲಾಗ್ತಿದೆ.
ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು 2019 ರ ಅತ್ಯುತ್ತಮ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ.