ಶ್ರೀಲಂಕಾದ ಮಾಜಿ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಇಂದು ತಮ್ಮ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳುನಾಡಿನ ಹಿಂದೂ ಕುಟುಂಬದವರಾದ ಇವರಿಗೆ ಭಾರತದಲ್ಲೂ ಅಭಿಮಾನಿಗಳ ದಂಡೇ ಇದೆ.
1992 ಆಗಸ್ಟ್ 28ರಂದು ಶ್ರೀಲಂಕಾ – ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪ್ರವೇಶಿಸಿದರು. ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ ಮುತ್ತಯ್ಯ ಮುರಳೀಧರನ್ 800 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಈ ದಾಖಲೆಯನ್ನು ಯಾವ ಬೌಲರ್ ಗಳು ಇನ್ನೂ ಸರಿಗಟ್ಟಿಲ್ಲ. ಏಕದಿನ ಕ್ರಿಕೆಟ್ ನಲ್ಲಿ 350 ಪಂದ್ಯಗಳನಾಡಿದ್ದು 534 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.
ಮುತ್ತಯ್ಯ ಮುರಳೀಧರನ್ ಇತ್ತೀಚೆಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದು, ಇಂದು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಮುತ್ತಯ್ಯ ಮುರಳೀಧರನ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಹಲವಾರು ಕ್ರಿಕೆಟಿಗರಿಂದ ಮುತ್ತಯ್ಯ ಮುರಳೀಧರನ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.