ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಕೆ ಎಲ್ ರಾಹುಲ್ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆ ಎಲ್ ರಾಹುಲ್ 2014 ಡಿಸೆಂಬರ್ 16ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಭಾರತ ಕ್ರಿಕೆಟ್ ತಂಡದ ಭರವಸೆಯ ಆಟಗಾರರಾಗಿರುವ ಕೆ ಎಲ್ ರಾಹುಲ್ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ 6 ನೇ ಸ್ಥಾನದಲ್ಲಿದ್ದಾರೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅತ್ಯುತ್ತಮ ನಾಯಕನಾಗಿದ್ದಾರೆ. ಇಂದು ಸಾಕಷ್ಟು ಕ್ರಿಕೆಟಿಗರು ಕೆ ಎಲ್ ರಾಹುಲ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ಕೂಡ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಕೆ ಎಲ್ ರಾಹುಲ್ ಗೆ ವಿಶ್ ಮಾಡಿದೆ. ಕೆ ಎಲ್ ರಾಹುಲ್ 1992 ಏಪ್ರಿಲ್ 18ರಂದು ಮಂಗಳೂರಿನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
https://twitter.com/PunjabKingsIPL/status/1383488064509550594