alex Certify 28ನೇ ವಸಂತಕ್ಕೆ ಕಾಲಿಟ್ಟ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

28ನೇ ವಸಂತಕ್ಕೆ ಕಾಲಿಟ್ಟ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ಯಾಟ್ ಕಮಿನ್ಸ್ 2011 ಅಕ್ಟೋಬರ್‌ 13ರಂದು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ ನಲ್ಲಿ 69 ಪಂದ್ಯಗಳನ್ನಾಡಿರುವ ಇವರು 111 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. ಐಸಿಸಿ ಟೆಸ್ಟ್‌ ರ್ಯಾಂಕಿಂಗ್ ಬೌಲರ್ ಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

ಪ್ಯಾಟ್ ಕಮಿನ್ಸ್ 1993 ಮೇ 8ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಕೆಆರ್ ಪ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಪ್ಯಾಟ್ ಕಮಿನ್ಸ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...