
ನವದೆಹಲಿ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ 7 ಸಾವಿರ ರನ್ ಪೂರ್ಣಗೊಳಿಸಿದ್ದು, ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶನಿವಾರ ದೆಹಲಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ವಿರಾಟ್ ಕೊಹ್ಲಿ ಇದುವರೆಗೆ 233 ಪಂದ್ಯಗಳನ್ನಾಡಿದ್ದಾರೆ. 5 ಶತಕ, 49 ಅರ್ಧ ಶತಕ ಸಿಡಿಸಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ದೆಹಲಿ ತಂಡದ ವಿರುದ್ಧ 1000 ರನ್ ಗಳಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಐಪಿಎಲ್ ನಲ್ಲಿ ಗರಿಷ್ಠ ರನ್ ಗಳಿಸಿರುವವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 7043 ರನ್ ಗಳಿಸಿ ಮೊದಲಿಗರಾಗಿದ್ದು, ಶಿಖರ್ ಧವನ್ 6,536 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.