alex Certify ಸದ್ದಿಲ್ಲದೇ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾದ ಕ್ರಿಕೆಟಿಗನಿಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ದಿಲ್ಲದೇ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾದ ಕ್ರಿಕೆಟಿಗನಿಗೆ ‘ಬಿಗ್ ಶಾಕ್’

ಆಫ್ಘಾನಿಸ್ತಾನದ ಕ್ರಿಕೆಟ್ ಆಟಗಾರ ಶಫಿಕ್ ಉಲ್ಲಾ ಶಫಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು ಆರು ವರ್ಷ ನಿಷೇಧ ಹೇರಲಾಗಿದೆ.

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಆಗಿರುವ ಶಫಿಕ್ ಉಲ್ಲಾ ಶಫಕ್ 2018 ರ ಅಫ್ಘಾನಿಸ್ತಾನ ಪ್ರಿಮಿಯರ್ ಲೀಗ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಅಲ್ಲದೆ ಶಫಕ್ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸುವಂತೆ ಸಹ ಆಟಗಾರರಿಗೆ ಪ್ರೇರೇಪಣೆ ಮಾಡಿದ್ದರೆನ್ನಲಾಗಿದೆ.

ಮ್ಯಾಚ್ ಫಿಕ್ಸಿಂಗ್ ಕುರಿತಾದ 4 ಆರೋಪಗಳು ಸಾಬೀತಾಗಿದ್ದು, ಅವರು ತಮ್ಮ ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆರು ವರ್ಷಗಳ ಕಾಲ ಶಫಕ್ ಗೆ ನಿಷೇಧ ಹೇರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...