ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಿದ್ಧತೆ ಕೈಗೊಳ್ಳಲಾಗಿದ್ದು, ಅಮೃತ ಕ್ರೀಡಾ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.
ರಾಜ್ಯ ಸರ್ಕಾರದಿಂದ ಅಮೃತ ಕ್ರೀಡಾ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಸ್ಟ್ 15 ರ ಭಾಷಣದಲ್ಲಿ ಕ್ರೀಡೆಗೆ ಉತ್ತೇಜನ ನೀಡುವುದರ ಜೊತೆಗೆ ಅಗತ್ಯ ಸೌಲಭ್ಯ ಕಲ್ಪಿಸುವ ಮತ್ತು ಕ್ರೀಡಾಪಟುಗಳನ್ನು ದತ್ತು ಪಡೆದು ಅಗತ್ಯ ತರಬೇತಿ ನೀಡುವ ಅಮೃತ ಕ್ರೀಡಾ ಯೋಜನೆಯ ಬಗ್ಗೆ ಘೋಷಣೆ ಮಾಡಿದ್ದರು.
2024ರ ಒಲಿಂಪಿಕ್ಸ್ ಗಮನದಲ್ಲಿಟ್ಟುಕೊಂಡು ಪದಕ ವಿಜೇತ ಸಾಮರ್ಥ್ಯವುಳ್ಳ 75 ಕ್ರೀಡಾಪಟುಗಳನ್ನು ಆಯ್ಕೆಮಾಡಿ ಸೂಕ್ತ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ ಕ್ರೀಡಾ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಅಮೃತ ಕ್ರೀಡಾ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.