alex Certify IPL ಟೂರ್ನಿ: ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಟೂರ್ನಿ: ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ

ನವದೆಹಲಿ: ಈ ವರ್ಷವೇ ಐಪಿಎಲ್ ನಡೆಯಲಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಲಾಕ್ಡೌನ್ ನಿಂದಾಗಿ ಈ ಸಲ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. 13ನೇ ಆವೃತ್ತಿಯ ಐಪಿಎಲ್ ಅನ್ನು ಅಕ್ಟೋಬರ್ ನಲ್ಲಿ ಆಯೋಜಿಸಲು ಬಿಸಿಸಿಐ ಯೋಜನೆ ರೂಪಿಸಿದೆ ಎಂದು ಹೇಳಲಾಗಿದೆ.

ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥರಾಗಿರುವ ಅನಿಲ್ ಕುಂಬ್ಳೆ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿ, ಐಪಿಎಲ್ ಟೂರ್ನಿ ಇದೇ ವರ್ಷ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮಾತನಾಡಿ, ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸುವ ಪರಿಸ್ಥಿತಿ ಎದುರಾದರೆ ಮೂರ್ನಾಲ್ಕು ನಗರಗಳನ್ನಷ್ಟೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಈ ವರ್ಷದ ಐಪಿಎಲ್ ಟೂರ್ನಿ ನಡೆಯುವುದು ಖಚಿತವಾಗಿದ್ದು ಸುರಕ್ಷತೆಯ ಉದ್ದೇಶದಿಂದ 3 -4 ಮೈದಾನಗಳನ್ನು ಹೊಂದಿರುವ ನಗರಗಳನ್ನು ಆಯ್ಕೆ ಮಾಡಿಕೊಂಡು ಅಂತಹ ನಗರಗಳಲ್ಲಿ ಟೂರ್ನಿ ಆಯೋಜಿಸಬೇಕಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...