alex Certify ಕೊರೊನಾ ವಿರುದ್ಧದ ಹೋರಾಟವನ್ನು ಕ್ರಿಕೆಟ್ ಭಾಷೆಯಲ್ಲಿ ಹೇಳಿದ ಅನಿಲ್ ಕುಂಬ್ಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವಿರುದ್ಧದ ಹೋರಾಟವನ್ನು ಕ್ರಿಕೆಟ್ ಭಾಷೆಯಲ್ಲಿ ಹೇಳಿದ ಅನಿಲ್ ಕುಂಬ್ಳೆ

ದೇಶಕ್ಕೆ ಕಂಟಕಪ್ರಾಯವಾಗಿರುವ ಪರಿಣಮಿಸಿರುವ ಮಾರಣಾಂತಿಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಆದರೂ ಕೂಡ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ.

ಕೊರೊನಾ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ‘ಜಂಬೋ’ ಎಂದೇ ಖ್ಯಾತರಾದ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಕ್ರಿಕೆಟ್ ಭಾಷೆಯಲ್ಲಿ ವಿವರಿಸಿದ್ದಾರೆ. ಇದರ ವಿಡಿಯೋವನ್ನು ಅನಿಲ್ ಕುಂಬ್ಳೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಾಕಿದ್ದಾರೆ.

ಕೊರೊನಾ ಸೋಂಕಿನ ವಿರುದ್ಧದ ಹೋರಾಟವನ್ನು ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಗೆಲುವು ಸಾಧಿಸಲು ನಡೆಯುವ ಹಣಾಹಣಿಗೆ ಅನಿಲ್ ಕುಂಬ್ಳೆಯವರು ಹೋಲಿಸಿದ್ದು, ಈ ಹೋರಾಟದಲ್ಲಿ ಹೆಚ್ಚು ಇನ್ನಿಂಗ್ಸ್ ಗಳಿವೆ. ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮುನ್ನಡೆ ಸಾಧಿಸಿದ್ದು ಎರಡನೇ ಇನ್ನಿಂಗ್ಸ್ ನಲ್ಲಿ ಒತ್ತಡ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...