ಬೆಂಗಳೂರು: ಸರ್ಕಾರಿ ಉದ್ಯೋಗಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ಜಯಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 9ರ ಸಂಜೆ 5 ಗಂಟೆಯ ಒಳಗೆ ಕ್ರೀಡಾ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ವಿವರ, ಅರ್ಜಿ ಸಲ್ಲಿಕೆಗಾಗಿ https://dyes.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ.