alex Certify ಭಾರತ v/s ಆಸ್ಟ್ರೇಲಿಯಾ: ಸಾಂಪ್ರದಾಯಿಕ ಬಾಕ್ಸಿಂಗ್​ ಡೇ ಟೆಸ್ಟ್​ಗೆ ಪ್ರೇಕ್ಷಕರ ಸಂಖ್ಯೆಯಲ್ಲಿ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ v/s ಆಸ್ಟ್ರೇಲಿಯಾ: ಸಾಂಪ್ರದಾಯಿಕ ಬಾಕ್ಸಿಂಗ್​ ಡೇ ಟೆಸ್ಟ್​ಗೆ ಪ್ರೇಕ್ಷಕರ ಸಂಖ್ಯೆಯಲ್ಲಿ ಹೆಚ್ಚಳ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್​ ಡೇ ಟೆಸ್ಟ್​ ಪಂದ್ಯವನ್ನ ವೀಕ್ಷಿಸಲು ದಿನಕ್ಕೆ 30 ಸಾವಿರ ಮಂದಿ ಪ್ರೇಕ್ಷಕರಿಗೆ ಅವಕಾಶ ನೀಡೋದಾಗಿ ಆಸ್ಟ್ರೇಲಿಯಾ ಕ್ರಿಕೆಟ್​ ಮಂಡಳಿ ಮಾಹಿತಿ ನೀಡಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿ ನಡೆಯುತ್ತಿದೆ. ಇದರಲ್ಲಿ 2ನೇ ಪಂದ್ಯ ಆಸ್ಟ್ರೇಲಿಯಾದ ಸಾಂಪ್ರದಾಯಿಕ ಬಾಕ್ಸಿಂಗ್ ಡೇ ಪಂದ್ಯವಾಗಿದೆ. ಡಿಸೆಂಬರ್​ 26ರಿಂದ ಆರಂಭವಾಗುವ 2ನೇ ಪಂದ್ಯಕ್ಕೆ ಪ್ರೇಕ್ಷಕರ ಸಂಖ್ಯೆಯನ್ನ ಹೆಚ್ಚಿಸಲಾಗಿದೆ.

ಈ ಮೊದಲು ಬಾಕ್ಸಿಂಗ್​ ಡೇ ಪಂದ್ಯಕ್ಕಾಗಿ ಕೇವಲ 25 ಸಾವಿರ ಮಂದಿ ಅಭಿಮಾನಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಗ ಈ ನಿಯಮವನ್ನ ಆಸ್ಟ್ರೇಲಿಯಾ ಕ್ರಿಕೆಟ್​ ಮಂಡಳಿ ಸಡಿಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...