ಬೀದರ್: ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕ್ರೀಡಾ ಕೋಚ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಈಗಾಗಲೇ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಕ್ರೀಡಾ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ದೊರೆತರೆ ರಾಷ್ಟ್ರೀಯ, ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ್ದಾರೆ.
ಒಂದು ಜಿಲ್ಲೆ ಒಂದು ಕ್ರೀಡೆ ಎಂಬಂತೆ ಆಯಾ ಜಿಲ್ಲೆಯ ವಿಶಿಷ್ಟ ಕ್ರೀಡೆಗಳನ್ನು ಗುರುತಿಸಿ ಕ್ರೀಡಾಪಟುಗಳಿಗೆ ತರಬೇತಿ ಕಲ್ಪಿಸಲಾಗುವುದು. ಅವರನ್ನು ಸಾಧಕರನ್ನಾಗಿ ಮಾಡುವ ಗುರಿ ಸರ್ಕಾರದ ಮುಂದಿದೆ. ಶೀಘ್ರವೇ 170ಕ್ಕೂ ಹೆಚ್ಚು ಕ್ರೀಡಾಕೋಚ್ ಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.