
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಹನಿ ಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರ ಕೆಲವು ವೈಯಕ್ತಿಕ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರು ಅನೇಕ ಫೋಟೋ, ವಿಡಿಯೋ ವೈರಲ್ ಆಗಿದ್ದು, ಹನಿಟ್ರ್ಯಾಪ್ ನಲ್ಲಿ ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ತಂಡ ಬಾಬರ್ ಆಜಮ್ ನಾಯಕತ್ವದಲ್ಲಿ ಕಳಪೆ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್ ಸರಣಿಯಲ್ಲಿ ಮುಖಭಂಗ ಅನುಭವಿಸಿದ್ದು, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿಯೂ ಸೋಲು ಕಂಡಿತ್ತು. ಬಾಬರ್ ಆಜಮ್ ನಾಯಕತ್ವದ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಈ ಮೂಲಕ ಪಾಕಿಸ್ತಾನ ಕ್ರಿಕೆಟ್ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಹೊಸ ವಿವಾದದಲ್ಲಿ ಪಾಕಿಸ್ತಾನದ ಎಲ್ಲಾ ಫಾರ್ಮ್ಯಾಟ್ ಗಳ ನಾಯಕ ಬಾಬರ್ ಆಜಮ್ ಹನಿ ಟ್ರ್ಯಾಪ್ ನಲ್ಲಿ ಸಿಲುಕಿದ್ದು ಅವರ ಫೋಟೋ ಮತ್ತು ವಿಡಿಯೋಗಳು ಆನ್ಲೈನ್ ನಲ್ಲಿ ಕಾಣಿಸಿಕೊಂಡಿವೆ. ಸದ್ಯಕ್ಕೆ ವಿಡಿಯೋಗಳ ಸತ್ಯಾಸತ್ಯತೆಯನ್ನು ಯಾರು ಕ್ಲೈಮ್ ಮಾಡಲು ಹೋಗಿಲ್ಲ. ಆದರೆ ವಿಡಿಯೋಗಳಲ್ಲಿ ಕಂಡು ಬರುವ ವ್ಯಕ್ತಿ ಬಾಬರ್ ಆಜಮ್ ರೀತಿ ಇದ್ದಾನೆ. ಇದು ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.