alex Certify ವಿಶ್ವಕಪ್ ಗೆದ್ದ ಅಂಡರ್-19 ತಂಡದ ಸದಸ್ಯರಿಗೆ ಭರ್ಜರಿ ಬಂಪರ್ ಬಹುಮಾನ ಘೋಷಿಸಿದ ಬಿಸಿಸಿಐ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಕಪ್ ಗೆದ್ದ ಅಂಡರ್-19 ತಂಡದ ಸದಸ್ಯರಿಗೆ ಭರ್ಜರಿ ಬಂಪರ್ ಬಹುಮಾನ ಘೋಷಿಸಿದ ಬಿಸಿಸಿಐ

19 ವರ್ಷದೊಳಗಿನವರ ವಿಶ್ವಕಪ್ ಗೆದ್ದ ಭಾರತೀಯ ತಂಡದ ಪ್ರತಿಯೊಬ್ಬ ಸದಸ್ಯರಿಗೆ 40 ಲಕ್ಷ ರೂಪಾಯಿ ನಗದು ಬಹುಮಾನವನ್ನು ಬಿಸಿಸಿಐ ಘೋಷಿಸಿದೆ. ಸಹಾಯಕ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಘೋಷಿಸಲಾಗಿದೆ.

ಆಂಟಿಗುವಾದಲ್ಲಿ ಶನಿವಾರ ನಡೆದ U-19 ವಿಶ್ವಕಪ್ ಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ಅನ್ನು ಸೋಲಿಸಿ ದಾಖಲೆಯ ಐದನೇ ಸಲ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಕೋವಿಡ್ -19 ಪ್ರಕರಣಗಳ ಹೊರತಾಗಿಯೂ ತಂಡವು ಧೈರ್ಯ, ದೃಢತೆ ಪ್ರದರ್ಶನ ತೋರಿಸಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಮುಖ್ಯ ಕೋಚ್ ಹೃಷಿಕೇಶ್ ಕಾನಿಟ್ಕರ್, ಅವರ ಕೋಚಿಂಗ್ ಗ್ರೂಪ್‌ನ ಸದಸ್ಯರು, ಸಹಾಯಕ ಸಿಬ್ಬಂದಿ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ತಂಡವನ್ನು ಉತ್ತಮ ಉತ್ಸಾಹದಲ್ಲಿ ಇರಿಸಲು ಮತ್ತು ಮಾರ್ಗದರ್ಶನ ನೀಡಿದ ರೀತಿಗಾಗಿ ಮಾಡಿದ ಪ್ರಯತ್ನಗಳನ್ನು ಪ್ರಶಂಸಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...