
ಬ್ರಿಸ್ಬೇಬ್ನ ಗಬ್ಬಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾ ಗೆಲುವಿಗೆ 328 ರನ್ಗಳ ಗುರಿ ನೀಡಿತ್ತು. ರಿಷಭ್ ಪಂತ್, ಶುಭ್ಮನ್ ಗಿಲ್ ಹಾಗೂ ಚೇತೇಶ್ವರ ಪೂಜಾರರ ಬ್ಯಾಟಿಂಗ್ನಿಂದಾಗಿ ಟೀಂ ಇಂಡಿಯಾ ಐತಿಹಾಸಿಕ ಗೆಲುವನ್ನ ಸಂಪಾದಿಸಿದೆ. ಕಳೆದ 32 ವರ್ಷಗಳಿಂದ ಈ ಮೈದಾನದಲ್ಲಿ ಸೋಲನ್ನೇ ಉಂಡಿದ್ದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನ ಸೋಲಿಸುವಲ್ಲಿ ಯಶಸ್ವಿಯಾಗಿದೆ.
ರಹಾನೆ ನಾಯಕತ್ವದ ಟೀಂ ಇಂಡಿಯಾದ ಸಾಧನೆಯನ್ನ ಕೊಂಡಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಇದೊಂದು ಅದ್ಭುತ ಗೆಲುವು. ಆಸ್ಟ್ಟೇಲಿಯಾಗೆ ಹೋಗಿ ಸರಣಿಯನ್ನ ಗೆದ್ದ ಈ ಕ್ಷಣ ಭಾರತದ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ನೆನಪಿನಲ್ಲಿ ಉಳಿಯಲಿದೆ. ಟೀಂ ಇಂಡಿಯಾಗೆ ಬಿಸಿಸಿಐ 5 ಕೋಟಿ ಬೋನಸ್ನ್ನು ಘೋಷಣೆ ಮಾಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಎಲ್ಲಾ ಆಟಗಾರರಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ್ದಾರೆ.