ಇಂಗ್ಲೆಂಡ್ ಹಾಗೂ ಟೀಂ ಇಂಡಿಯಾ ವಿರುದ್ಧ ಚೆಪಾಕ್ ಹಾಗೂ ಹೊಸದಾಗಿ ನಿರ್ಮಿಸಲಾದ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 50 ಪ್ರತಿಶತ ಪ್ರೇಕ್ಷಕರಿಗೆ ಅನುಮತಿ ನೀಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ.
ಮೊದಲ ಎರಡು ಟೆಸ್ಟ್ ಪಂದ್ಯ ಚೆನ್ನೈನಲ್ಲಿ ಫೆಬ್ರವರಿ 5ರಿಂದ ನಡೆಯಲಿದೆ. ನಂತರದ ಎರಡು ಪಂದ್ಯಗಳು ಅಹಮದಾಬಾದ್ನ ಮೊಟೆರೋ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಂಗಳವಾರ ಮುಕ್ತಾಯಗೊಂಡ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಪ್ರೇಕ್ಷಕರಿಗೆ ಅನುಮತಿ ನೀಡಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯಿಂದ ಸಲಹೆಗಳನ್ನ ಬಿಸಿಸಿಐ ಕೇಳಲಿದೆ ಎನ್ನಲಾಗಿದೆ.
ನಾಲ್ಕು ಟೆಸ್ಟ್ ಪಂದ್ಯಗಳಿಗೆ ನಾವು 50 ಪ್ರತಿಶತ ಪ್ರೇಕ್ಷಕರನ್ನ ಅನುಮತಿಸುವ ಸಾಧ್ಯತೆ ಇದೆ. ಬಿಸಿಸಿಐ ರಾಜ್ಯ ಕ್ರಿಕೆಟ್ ಸಂಘ ಹಾಗೂ ರಾಜ್ಯ ಆಯೋಗದ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರೋದಾಗಿ ಬಿಸಿಸಿಐ ಮಾಹಿತಿ ನೀಡಿದೆ.