alex Certify ಬಿಸಿಸಿಐ ಕ್ರಾಂತಿಕಾರಿ ನಿರ್ಧಾರ: ಜಯ್ ಶಾ ಮಹತ್ವದ ಘೋಷಣೆ: ಮಹಿಳಾ ಕ್ರಿಕೆಟರ್ ಗಳಿಗೆ ಪುರುಷರಷ್ಟೇ ವೇತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಕ್ರಾಂತಿಕಾರಿ ನಿರ್ಧಾರ: ಜಯ್ ಶಾ ಮಹತ್ವದ ಘೋಷಣೆ: ಮಹಿಳಾ ಕ್ರಿಕೆಟರ್ ಗಳಿಗೆ ಪುರುಷರಷ್ಟೇ ವೇತನ

ಬಿಸಿಸಿಐ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದ್ದು, ಮಹಿಳಾ ಕ್ರಿಕೆಟರ್ ಗಳಿಗೆ ಪುರುಷರಷ್ಟೇ ವೇತನ ನೀಡಲಾಗುವುದು.

ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ., ಏಕದಿನ ಪಂದ್ಯಕ್ಕೆ 6 ಲಕ್ಷ ರೂ., ಟಿ20 ಪಂದ್ಯಕ್ಕೆ 3 ಲಕ್ಷ ರೂಪಾಯಿ ನೀಡಲಾಗುವುದು. ಕ್ರಿಕೆಟ್ ನಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಪುರುಷರು ಹಾಗೂ ಮಹಿಳಾ ಆಟಗಾರರಿಗೆ ಸಮಾನ ವೇತನ ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಮಾಹಿತಿ ನೀಡಿ, ತಾರತಮ್ಯ ತೊಡೆದು ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಿಸಿಸಿಐನ ಕೇಂದ್ರೀಯ ಒಪ್ಪಂದಕ್ಕೆ ಒಳಪಟ್ಟ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ಪ್ರತಿ ಪಂದ್ಯಕ್ಕೆ ಸಮಾನ ವೇತನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...