
ಕೆಲ ತಂಡಗಳ ಆಟಗಾರರು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿರುವ ಕಾರಣ ಐಪಿಎಲ್ ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ.
ಈ ಕುರಿತಂತೆ ಬಿಸಿಸಿಐ ಮಹತ್ವದ ಮಾಹಿತಿ ನೀಡಿದ್ದು, ಐಪಿಎಲ್ ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರ ನಡುವೆಯೂ ಐಪಿಎಲ್ ಪಂದ್ಯಾವಳಿ ನಡೆಸುತ್ತಿರುವುದಕ್ಕೆ ಆರಂಭದಲ್ಲೇ ಅಪಸ್ವರ ಕೇಳಿ ಬಂದಿತ್ತು.
ಇದರ ಮಧ್ಯೆಯೂ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲಾಗುತ್ತಿತ್ತು. ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಸಹ ಆಟಗಾರರ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು.
ಇದೀಗ ಬಿಸಿಸಿಐ ಅನಿವಾರ್ಯವಾಗಿ ಐಪಿಎಲ್ ಪಂದ್ಯಾವಳಿಗಳನ್ನು ರದ್ದುಗೊಳಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಂಡಿದೆ.