alex Certify BREAKING: ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಉಪನಾಯಕ KL ರಾಹುಲ್ ಗೆ ಕೊರೋನಾ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಉಪನಾಯಕ KL ರಾಹುಲ್ ಗೆ ಕೊರೋನಾ ದೃಢ

ಭಾರತ –ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಭಾರತ ಆಟಗಾರ ಕೆ.ಎಲ್. ರಾಹುಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಟೀಂ ಇಂಡಿಯಾ ಉಪನಾಯಕ ಕೆ.ಎಲ್. ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸದ ಮೊದಲು COVID-19 ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಹೊಂದಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ(ಎನ್‌.ಸಿ.ಎ.) ಗಾಯದಿಂದ ಶಸ್ತ್ರಚಿಕಿತ್ಸೆಗಾಗಿ ಅವರು ಇತ್ತೀಚೆಗೆ ಜರ್ಮನಿಯಲ್ಲಿದ್ದರು. ಚೇತರಿಸಿಕೊಂಡ ನಂತರ ಅವರು ಕೊರೋನಾಗೆ ತುತ್ತಾಗಿದ್ದು, ಸರಣಿಯಿಂದ ಹೊರಗುಳಿಯಲಿದ್ದಾರೆ.

ಶುಕ್ರವಾರ (ಜುಲೈ 22) ರಂದು ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ODI-ಸರಣಿಗೆ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ವೈಟ್ ಬಾಲ್ ಸರಣಿಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಲ ಸಿಕ್ಕಿದ್ದು, ಕುಲದೀಪ್ ಯಾದವ್ ಕೆರಿಬಿಯನ್ ದ್ವೀಪಕ್ಕೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ವರದಿಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...