ನವದೆಹಲಿ: ಜಿಂಬಾಬ್ವೆ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿರಾಟ್ ಕೊಹ್ಲಿಗೆ ಮತ್ತೆ ವಿಶ್ರಾಂತಿ ನೀಡಲಾಗಿದೆ. ಶಿಖರ್ ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 18 ರಿಂದ ಜಿಂಬಾಬ್ವೆ ಸರಣಿ ಆರಂಭವಾಗಲಿದೆ. 3 ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ 15 ಸದಸ್ಯರ ತಂಡವನ್ನು ಶನಿವಾರ ಪ್ರಕಟಿಸಿದೆ.
ಎಸ್. ಧವನ್(ನಾಯಕ), ಆರ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಎಂಡಿ ಸಿರಾಜ್, ದೀಪಕ್ ಚಾಹರ್ ಅವರನ್ನು ಆಯ್ಕೆ ಮಾಡಲಾಗಿದೆ.