ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಈ ಪಂದ್ಯದ ವೇಳೆಯಲ್ಲಿ ಮೊಹಮ್ಮದ್ ಸಿರಾಜ್ ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಹೊಡೆದ ವಿಡಿಯೋ ವೈರಲ್ ಆಗಿದೆ.
ಭಾರತ ಬ್ಯಾಟಿಂಗ್ ನಡೆಸುವ ಸಂದರ್ಭದಲ್ಲಿ ರೋಹಿತ್ ಶರ್ಮ ಅವರ ತಲೆಗೆ ಹೊಡೆದಿದ್ದಾರೆ. ಅವರ ಈ ವರ್ತನೆಗೆ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದರೊಂದಿಗೆ ತಮಾಷೆ ಮಾಡಿದ್ದಾರೆ ಎನ್ನುವ ಅಭಿಪ್ರಾಯವೂ ಕೇಳಿಬಂದಿದೆ.
ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ನಡೆಸುವಾಗ ಡಗೌಟ್ ನಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ರೋಹಿತ್ ಶರ್ಮ ತಮಾಷೆಯಿಂದ ಮೊಹಮ್ಮದ್ ಸಿರಾಜ್ ತಲೆಗೆ ಹೊಡೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಇದೇನು ಗಂಭೀರ ಘಟನೆಯಲ್ಲ, ತಮಾಷೆಗಾಗಿ ಈ ರೀತಿ ಮಾಡಲಾಗಿದೆ ಎಂದು ಹೇಳಲಾಗಿದೆ.