alex Certify ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ: ಕ್ರೀಡೆ ಉತ್ತೇಜನಕ್ಕೆ 3000 ಕೋಟಿ ರೂ. ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ: ಕ್ರೀಡೆ ಉತ್ತೇಜನಕ್ಕೆ 3000 ಕೋಟಿ ರೂ. ಘೋಷಣೆ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಕೇಂದ್ರವು 3,000 ಕೋಟಿ ರೂಪಾಯಿಗಳನ್ನು ವ್ಯಯಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿದ ಭಾರತದ ಅಥ್ಲೀಟ್‌ ಗಳ ತಂಡದೊಂದಿಗೆ ನವದೆಹಲಿಯಲ್ಲಿ ಸಂವಾದ ನಡೆಸಿದ ಪ್ರಧಾನಿ, ದೇಶದ ಮೂಲೆ ಮೂಲೆಯಲ್ಲಿರುವ ಕ್ರೀಡಾಪಟುಗಳಿಗೆ ಆಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದೆ. ಹಣದ ಕೊರತೆ ಅವರ ಪ್ರಯತ್ನಗಳಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಭಾರತ ಎಂದಿಗೂ ಪ್ರತಿಭೆಯ ಕೊರತೆಯನ್ನು ಹೊಂದಿಲ್ಲ ಮತ್ತು ಕ್ರೀಡಾಪಟುಗಳು ಈ ಹಿಂದೆ ಉತ್ತಮ ಪ್ರದರ್ಶನ ನೀಡಿದ್ದರು, ಆದರೆ ಅನೇಕ ಸವಾಲುಗಳಿಂದಾಗಿ ನಾವು ಪದಕಗಳ ವಿಷಯದಲ್ಲಿ ಹಿಂದುಳಿದಿದ್ದೇವೆ. ಕ್ರೀಡಾಪಟುಗಳಿಗೆ ಅತ್ಯುತ್ತಮ ತರಬೇತಿ ಸೌಲಭ್ಯಗಳನ್ನು ಒದಗಿಸುವುದು, ಕ್ರೀಡಾಪಟುಗಳಿಗೆ ಗರಿಷ್ಠ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನ್ಯತೆ, ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸುವುದು ಮತ್ತು ಗರಿಷ್ಠ ಅವಕಾಶವನ್ನು ಒದಗಿಸುವುದು ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಉತ್ತೇಜನ ನೀಡಲಾಗಿದೆ. 9 ವರ್ಷಗಳ ಹಿಂದಿನ ಕ್ರೀಡಾ ಬಜೆಟ್‌ಗೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಿಸಲಾಗಿದೆ. ಟಾರ್ಗೆಟ್ ಒಲಂಪಿಕ್ ಪೋಡಿಯಂ ಸ್ಕೀಮ್, ಖೇಲೋ ಇಂಡಿಯಾ ಯೋಜನೆಗಳ ಕುರಿತು ವಿವರಿಸಿದ ಪ್ರಧಾನಮಂತ್ರಿ, ಮೂರು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಖೇಲೋ ಇಂಡಿಯಾ ಅಡಿಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆಯು ಅದರ ಯಶಸ್ಸಿಗೆ ಸಾಕ್ಷಿಯಾಗಿದೆ. ಕ್ರೀಡಾಪಟುಗಳು ಇತಿಹಾಸ ಸೃಷ್ಟಿಸಿದ್ದಾರೆ. ಏಷ್ಯನ್ ಗೇಮ್ಸ್‌ ನಲ್ಲಿ ಅವರ ಸಾಧನೆಯು ಒಲಿಂಪಿಕ್ಸ್‌ ನಲ್ಲಿ ನಮ್ಮ ಕ್ರೀಡಾಪಟುಗಳ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...