ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಆಘಾತಕಾರಿ ಸತ್ಯವನ್ನು ಹೊರಹಾಕಿದ ಚೇತನ್ ಶರ್ಮಾ ಆಟಗಾರರು ಫಿಟ್ ಆಗಲು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅರ್ಧ ಫಿಟ್ ಆಗಿದ್ದರೂ ಶೇಕಡ 100ರಷ್ಟು ಫಿಟ್ ಆಗಲು ನಿಷೇಧಿತ ಚುಚ್ಚುಮದ್ದು ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಬಹಿರಂಗಪಡಿಸಿದ್ದಾರೆ.
ಈ ಚುಚ್ಚುಮದ್ದುಗಳಲ್ಲಿ ಔಷಧವಿದ್ದು, ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬೀಳುವುದಿಲ್ಲ ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು 80% ಫಿಟ್ ಆಗಿದ್ದರೂ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ. 100% ಫಿಟ್ ಆಗುತ್ತಾರೆ. ಇವು ನೋವು ನಿವಾರಕಗಳಲ್ಲ. ಈ ಚುಚ್ಚುಮದ್ದುಗಳು ಡೋಪ್ ಟೆಸ್ಟ್ ನಲ್ಲಿ ಸಿಕ್ಕಿಹಾಕಿಕೊಳ್ಳದ ಡ್ರಗ್ ಅನ್ನು ಒಳಗೊಂಡಿವೆ ಎಂದು ಹೇಳಿದ್ದಾರೆ.